ನವದೆಹಲಿ: ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಈಗಿನಿಂದಲೇ ತಯಾರಿ ಆರಂಭಿಸಿದ್ದು, ಪ್ರಿಯಾಂಕ ಗಾಂಧಿ ಅವರ ನೇತೃತ್ವದಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ.
ಈ ಮೊದಲು ದೆಹಲಿ ಮಾಜಿ ಮುಖ್ಯಮಂತ್ರಿ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮಾಡಲು ಯೋಜಿಸಲಾಗಿತ್ತು. ಆದರೆ, ಅದು ಆರಂಭಿಕ ಹಂತದಲ್ಲಿಯೇ ಇದ್ದು, ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರ ಒತ್ತಾಸೆಯಂತೆ, ಪ್ರಿಯಾಂಕ ಗಾಂಧಿ ಅವರಿಗೆ ಸಾರಥ್ಯ ವಹಿಸುವ ಸಾಧ್ಯತೆ ಇದೆ. ಈ ಸಂಬಂಧ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಮನವಿ ಮಾಡಲು ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಅವರು ಒಪ್ಪಿದರೆ, ಪ್ರಿಯಾಂಕ ರಾಜಕೀಯ ಅಖಾಡಕ್ಕೆ ಇಳಿಯಲಿದ್ದಾರೆ ಎನ್ನಲಾಗಿದೆ.
ಕಳೆದ ಚುನಾವಣೆಯನ್ನು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಎದುರಿಸಿದ್ದ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಯಶಸ್ಸು ಸಿಕ್ಕಿರಲಿಲ್ಲ. ಹಾಗಾಗಿ, ಚುನಾವಣೆ ತಂತ್ರಗಾರಿಕೆ ಬದಲಿಸಿ, ಪ್ರಿಯಾಂಕ ಗಾಂಧಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕೆಂಬ ಮಾತುಗಳು ಉತ್ತರ ಪ್ರದೇಶ ಕಾಂಗ್ರೆಸ್ ವಲಯದಲ್ಲಿ ಕೇಳಿಬಂದಿದೆ.