ಮುಂಡಗೋಡ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜಮೀನು ಕೆಲಸಕ್ಕೆ ಹೋಗಿದ್ದ ಬಾಲಕಿ ಮೇಲೆ, 29 ವರ್ಷದ ಕಾಮುಕ ದೌರ್ಜನ್ಯ ನಡೆಸಿದ್ದಾನೆ.
14 ವರ್ಷ ವಯಸ್ಸಿನ ಬಾಲಕಿ, ಗ್ರಾಮದ ಸಮೀಪದಲ್ಲಿಯೇ ಇರುವ ಆರೋಪಿಯ ಜಮೀನಿಗೆ ಕೆಲಸಕ್ಕೆ ಹೋಗಿದ್ದು, ಈ ಸಂದರ್ಭದಲ್ಲಿ ಕಾಮುಕ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎನ್ನಲಾಗಿದೆ. ಮನೆಗೆ ಬಂದ ಬಾಲಕಿ ಪೋಷಕರಿಗೆ ವಿಷಯ ತಿಳಿಸಿದ್ದು, ಅವರು ಗ್ರಾಮಸ್ಥರ ನೆರವಿನಿಂದ ಮುಂಡಗೋಡ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ಆರೋಪಿ, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಅಪ್ರಾಪ್ತೆಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೋಷಕರು ದೂರು ನೀಡಿದ್ದು, ಇದರ ಅನ್ವಯ ಪ್ರಕರಣ ದಾಖಲಿಸಿಕೊಂಡ, ಪೊಲೀಸರು, ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.