ಜೂನ್ 26 ರಂದು ನಡೆದಿದ್ದ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಪಂಚಾಯತ್ ಚುನಾವಣಾ ಫಲಿತಾಂಶ ಇಂದು ಹೊರ ಬಿದ್ದಿದ್ದು, 19 ಸ್ಥಾನಗಳ ಪೈಕಿ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಜೆಡಿಎಸ್ ಅಧಿಕಾರ ಗದ್ದುಗೆಗೇರಲಿದೆ.
ಸೊರಬದ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಮತ ಎಣಿಕೆ ನಡೆದಿದ್ದು, ಜೆಡಿಎಸ್ 11, ಬಿಜೆಪಿ 5 ಹಾಗೂ ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಈ ಮೂಲಕ ಶಾಸಕ ಮಧು ಬಂಗಾರಪ್ಪ ತಮ್ಮ ಪ್ರಾಬಲ್ಯ ಉಳಿಸಿಕೊಂಡಿದ್ದರೆ, ಮಾಜಿ ಸಚಿವರುಗಳಾದ ಬಿಜೆಪಿಯ ಹರತಾಳು ಹಾಲಪ್ಪ ಹಾಗೂ ಕಾಂಗ್ರೆಸ್ ನ ಕುಮಾರ್ ಬಂಗಾರಪ್ಪ ಮುಖಭಂಗ ಅನುಭವಿಸಿದ್ದಾರೆ.